ಒತ್ತಡದ ಬದುಕಿಗೆ ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ- ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.29: ಒತ್ತಡದ ಜೀವನ ಶೈಲಿಯಲ್ಲಿ ಕ್ರೀಡೆ ಅತ್ಯಮೂಲ್ಯ ಸಾಧನ ಸದೃಢ ಆರೋಗ್ಯ ಹೊಂದಿ ಕ್ರೀಯಾಶೀಲತೆ ಮೈಗೂಢಿಸಿಕೊಂಡು ನೆಮ್ಮದಿ ಹಾಗೂ ಉಲ್ಲಸಿತವಾಗಿರಲು ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಳ್ಳುವುದು ಅಗತ್ಯವಾಗಿದೆ ಎಂದು ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ಪ್ರತಿದಿನ ಚೈತನ್ಯದಿಂದರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ದೈನಂದಿನ ಬದುಕಿನ ಜೀವನ ಶೈಲಿಯಾಗಿಸಿ ಕೊಳ್ಳಬೇಕು.ಕ್ರೀಡೆಯಲ್ಲಿ ಸೋಲು-ಗೆಲವು ಸಾಮಾನ್ಯವಾಗಿದ್ದು, ಭಾಗವಹಿಸುವಿಕೆ ಅತಿಮುಖ್ಯವಾಗಿರುತ್ತದೆ. ಆ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಎಲ್ಲ ಕ್ರೀಡೆಗಳಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೂ ಜಿಲ್ಲೆಯ ಸ್ಪರ್ಧಾಳುಗಳು ಭಾಗವಹಿಸಲಿ ಎಂದು ಹಾರೈಸಿದರು.
ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸಲು ನಮ್ಮ ಸರಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.
ತಮ್ಮ ಆರೋಗ್ಯ ಕಾಳಜಿ ಬಗ್ಗೆಯೂ ನಿಗಾ ವಹಿಸಬೇಕು. ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಸದೃಢಗೊಳಿಸಲು ಪೂರಕವಾಗಿ ಸಹಕಾರಿಯಾಗಿವೆ. ದೇಹ ಮತ್ತು ಮನಸ್ಸು ಆರೋಗ್ಯವಾಗಿರಲು ಕ್ರೀಡೆ ಅತ್ಯುತ್ತಮ ಸಾಧನವಾಗಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಜೊತೆಗೆ ಸಂವಹನ ಕೌಶಲ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಔದ್ರಾಮ ಮಾತನಾಡಿ, ಒತ್ತಡ ಜೀವನ ಶೈಲಿಯಲ್ಲಿ ಕ್ರೀಡೆ ನಮ್ಮ ಆರೋಗ್ಯ ಹಾಗೂ ಆಲೋಚನಾ ಮಟ್ಟ ಹೆಚ್ಚಿಸುವಲ್ಲಿ ಹಾಗೂ ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಲು ಸಮರ್ಪಣೆ ಹಾಗೂ ತಾಳ್ಮೆಯ ಮೌಲ್ಯ ಕಲಿಸಿಕೊಡುವಲ್ಲಿ ಆಟೋಟಗಳ ಪಾತ್ರ ಬಹುಮುಖ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ನಿಯಮಿತವಾಗಿ ಒಂದಾದರೊದು ಚಟುವಟಿಕೆಗಳಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಗೆ ಹೆಚ್ಚಿನ ಗೌರವ ತರಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಅಡಿವೆಪ್ಪ ಸಲಾಗಲ್,ಜಾವೀದ್ ಜಮಾದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share this