ಸಪ್ತಸಾಗರ ವಾರ್ತೆ, ವಿಜಯಪುರ,ಜ.8: ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಜ.9ರಂದು ನಗರದ ವಿ.ಬಿ ದರ್ಬಾರ ಹೈಸ್ಕೂಲ್ ಮೈದಾನದ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ
ಜಲ ಸಂಪನ್ಮೂಲ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ
ಡಿ. ಕೆ. ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಬಿ. ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ನಗರದ ಶಾಸಕರಾದ ಬಸನಗೌಡ ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಕಂದಾಯ ಸಚಿವ ಕೃಷ್ಣಬೈರೆಗೌಡ, ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ. ಝಡ್ ಜಮೀರ್ ಅಹ್ಮದಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ (ಕೆಯುಡಬ್ಲ್ಯೂಎಸ್ ಡಿಬಿ/ಕೆಯುಐಡಿಎಫ್‌ಸಿ) ಸಚಿವ ಸುರೇಶ.ಬಿ.ಎಸ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ವಿಧಾನ ಪರಿಪತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್. ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್‌ನ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಹೆಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್. ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ಎಸ್. ಕವಲಗಿ, ಕಲಬುರ್ಗಿ ಕ.ಕ.ರ.ಸಾ.ನಿಗಮದ ಅಧ್ಯಕ್ಷ ಅರುಣಕುಮಾರ ಎಂ. ವೈ. ಪಾಟೀಲ, ಮಹಾನಗರ ಪಾಲಿಕೆ ಮಹಾಪೌರರಾದ ಮಡಿವಾಳಪ್ಪ ಸಿದ್ಧರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇಂಧನ ಮತ್ತು ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ ಸಿಂಗ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್,
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲಾ ಇಕ್ವಾಲ್, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ. ರಂದೀಪ್, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಖುಷ್ಟೂ ಬಿ. ಚೌಧರಿ, ನಗರಾಭಿವೃದ್ಧಿ ಇಲಾಖೆ (ನಗರಸಭೆ ಮತ್ತು ಮರಸಭೆಗಳು)ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಾಕಾರಿ ನಿರ್ದೇಶಕ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ ಘೋಷ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಎಂ. ಕನಗವಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜೆ.ಮಂಜುನಾಥ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ. ಎಂ. ಜಾನಕಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ


