ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.
ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ. ಬಿ. ಎಸ್. ಹಿರೇಮಠ, ಮಹರ್ಷಿ ವಾಲ್ಮೀಕಿ ಅವರು ಕಾಡಿನಲ್ಲಿದ್ದುಕೊಂಡು ಮನುಕುಲದ ಹಿತಕ್ಕಾಗಿ ಜೀವನ ಸಾಗಿಸಿದವರು. ಸಚಿವ ಡಾ. ಎಂ. ಬಿ. ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನದ ಮೂಲಕ ಜಿಲ್ಲೆಯಲ್ಲಿ ಅರಣ್ಯವನ್ನು ನಿರ್ಮಿಸಿ ಮನುಕುಲಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು‌.
ಈ ಸಂದರ್ಭದಲ್ಲಿ‌ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ.‌ ಎಸ್.‌ ಹಿರೇಮಠ, ಪ್ರಶಿಕ್ಷಣಾರ್ಥಿ ವೈಷ್ಣವಿ ಹಡಪದ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

Share this