ಡಾ. ಬಿ.ಆರ್.ಅಂಬೇಡ್ಕರ್ ವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6:
ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಆರತಿ ಶಹಾಪೂರ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ,ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಅರವಿಂದ ಲಂಬು, ಕೆಕೆಆರ್‌ಟಿಸಿಯ ಸಹಾಯಕ ಸಂಚಾರ ವ್ಯವಸ್ಥಾಪಕ ಜೆ.ಕೆ ಹುಗ್ಗೆಣ್ಣವರ, ನಾಗರಾಜ ಲಂಲು, ಅಭಿಷೇಕ ಚಕ್ರವರ್ತಿ, ರಮೇಶ ಆಸಂಗಿ, ಮಲ್ಲಿಕಾರ್ಜುನ ಬರಟಗಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ಡಾ. ಐ.ಎಸ್. ಶಿವಶರಣರ, ಸುಧಾಕರ್ ಕನಮಡಿ, ಭಾರತಿ ಹೊಸಮನಿ, ಮಹೇಶ ಕ್ಯಾತಣ್ಣ, ಶಾಂತಪ್ಪ ಶಹಾಪೂರ, ಜಿತೇಂದ್ರ ಕಾಂಬಳೆ, ಈರಪ್ಪ ನಡುವಿನಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

Share this