ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:
ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.
ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಜ. 29 ರಂದು ಗುರುವಾರ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿರಲಿದ್ದಾರೆ. ಅಲ್ಲದೇ, ಉದ್ತಮಿಗಳಾದ ವಿಜಯ ಸಂಕೇಶ್ವರ, ಬಿ. ಎಂ. ಜಯಶಂಕರ, ಡಾ. ಶರಣ ಪಾಟೀಲ, ಬಾಲಚಂದ್ರಸಿಂಗ್ ರಾವ ರಾಣೆ, ರಬೀಂದ್ರನಾಥ ಅವರು ಭಾಗವಹಿಸಲಿದ್ದಾರೆ.
ಫೆ. 1 ರಂದು ರವಿವಾರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಚಿಕ್ಕಮಗಳೂರು ಬಸವತತ್ವ ಪೀಠದ ಡಾ. ಶ್ರೀ ಶಿವಬಸವ ಮರುಳಸಿದ್ಧ ಸ್ವಾಮೀಜಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕ ಮತ್ತು ವೀರಶೈವ ಕರ್ನಾಟಕ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ರಾಣಿ ಸತೀಶ, ವಿಧಾನ ಪರಿಷತ ಶಾಸಕ ನವೀನ ಕೆ. ಉಪಸ್ಥಿತರಿರಲಿದ್ದಾರೆ.
ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯದಿಂದ ದೇಶದ ಅಭಿವೃದ್ಧಿಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಲು ನೆರವಾಗುವುದು ಇದರ ಉದ್ದೇಶವಾಗಿದೆ. 2024ರಲ್ಲಿ ಹುಬ್ಬಳ್ಳಿ ಕಾನಕ್ಲೇವ್ ನಲ್ಲಿ ರೂ. 64 ಕೋ., 2025 ಮೈಸೂರು ಕಾನಕ್ಲೇವ್ ನಲ್ಲಿ ರೂ. 130 ಕೋ. ಮೌಲ್ಯದ ವ್ಯವಹಾರಗಳು ನಡೆದಿವೆ. ಈ ಬಾರಿ ಬೆಂಗಳೂರು ಕಾನಕ್ಲೇವ್- 2026 ಹೊಸ ಮೈಲುಗಲ್ಲು ಸ್ಥಾಪನೆಯಾಗುವ ವಿಶ್ವಾಸವಿದೆ ಎಂದು ಡಾ. ಗಂಗಾಧರ ಸಂಬಣ್ಣಿ ಮತ್ತು ಶಾಂತೇಶ ಕಳಸಗೊಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


