ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:
ಇಲ್ಲಿನ ಜಲನಗರದಲ್ಲಿರುವ ಬಿಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೇಕರ್ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರ ಬದುಕಿನ ಯಶಸ್ಸಿನ ಹಿಂದೆ ತಾಯಿಯ ಆಶೀರ್ವಾದ, ಪ್ರೋತ್ಸಾಹ, ಪರಿಶ್ರಮ ಮತ್ತು ತ್ಯಾಗದ ಮಹತ್ವದ ಪಾತ್ರವಿದೆ. ತಾಯಿಯನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ತಾಯಂದಿರಿಗಾಗಿ ವಿವಿಧ ಮನರಂಜನಾ ಸ್ಪರ್ಧೆಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ನೃತ್ಯ, ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪಾಲಕರ ಮೆಚ್ಚುಗೆಗೆ ಪಾತ್ರವಾದವು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಸಂಯೋಜಕಿ ಜಯಾ ಗಲಗಲಿ, ಶಿಕ್ಷಕ-ಶಿಕ್ಷಕಿಯರು, ಬೋಧಕೇತರ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿವಿಶ್ವ ತಾಯಂದಿರ ದಿನಾಚರಣೆ


