ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24:
ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎ.ಎಚ್. ಕೊಳಮಲಿಯವರಿಗೆ ಕರುನಾಡು ಕಲ್ಪವೃಕ್ಷ ಫೌಂಡೇಶನ್ ಚಿತ್ರದುರ್ಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ಮತ್ತು ಬಾಗಲಕೋಟೆ ಜಿಲ್ಲೆಯ ಚಿಕ್ಕಮಾಗೇರಿ, ಹಿರೇಮ್ಯಾಗೇರಿಯ ತರುಣ ಸಂಘದ ವತಿಯಿಂದ ಕೊಡಮಾಡುವ ‘ಆದರ್ಶ ಶಿಕ್ಷಕ’ ಪ್ರಶಸ್ತಿಯು ಲಭಿಸಿದೆ.
ನಾಡಿನ ಉದಯೋನ್ಮುಖ ಸಾಹಿತಿ ಕೊಳಮಲಿಯವರು ಖ್ಯಾತ ವಾಗ್ಮಿಯೂ ಕೂಡಾ ಆಗಿದ್ದಾರೆ. ಜಾನಪದ ವಿದ್ವಾಂಸರಾದ ಇವರ ಬಹುಮುಖ ಪ್ರತಿಭೆಗೆ ಈ ಮುಂಚಿತವಾಗಿ ರಾಜ್ಯೋತ್ಸವ ಪ್ರಶಸ್ತಿ, ಉತ್ತಮ ಉಪನ್ಯಾಸಕ ಪ್ರಶಸ್ತಿ, ಬಸವಭೂಷಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ದೊರಕಿವೆ.
ಮೇ 28ರಂದು ಬಾಗಲಕೋಟೆ ಜಿಲ್ಲೆಯ ಚಿಕ್ಕಮ್ಯಾಗೇರಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ನಡೆಯುವ ಕಲ್ಪವೃಕ್ಷ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕರುನಾಡು ಕಲ್ಪವೃಕ್ಷ ಫೌಂಡೇಶನದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತಿ,ಪ್ರೊ ಎ ಎಚ್ ಕೊಳಮಲಿಯವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ


