ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8 :
ರಾಜ್ಯ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರˌ ಬೆಂಗಳೂರುˌ ಪುಸ್ತಕ ಸಂಸ್ಕೃತಿಯನ್ನು ಉಳಿಸಿˌ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಿದ್ದು ˌ ನಗರದ ಸಾಹಿತಿˌ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಮುರುಗೇಶ ಸಂಗಮ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ
ಅಧ್ಯಕ್ಷ ಡಾ. ಮಾನಸ ಅವರು ತಿಳಿಸಿದ್ದಾರೆ.
ಈ ಯೋಜನೆಯು ಓದುವ ಸಂಸ್ಕೃತಿಯನ್ನು ಉಳಿಸಲು ಲೇಖಕರು ಮತ್ತು ಪ್ರಕಾಶಕರಿಗೆ ಬೆಂಬಲ ನೀಡಲು ಹಾಗೂ ಜನಾಧಾರಿತ ಸಮಾಜ ನಿರ್ಮಿಸುವ ಗುರಿ ಹೊಂದಿದೆ. ಈ ಯೋಜನೆ ರಾಜ್ಯದ ಒಂದು ಲಕ್ಷ ಮನೆಗಳಲ್ಲಿ ಸಣ್ಣ ಗ್ರಂಥಾಲಯಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಉಪಕ್ರಮವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ ಮುರುಗೇಶ ಸಂಗಮ ನೇಮಕ


