ಸಪ್ತಸಾಗರ ವಾರ್ತೆ,ವಿಜಯಪುರ: ನಗರದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಅಪರಿಚಿತ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ ಕೂಡಾ ಪೊಲೀಸರು ನಡೆಸಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Editor
Rudrappa B Asangi
Editor
Managing Editor
Chetan Asangi
Managing Editor


